ನನ್ನ ಬಗ್ಗೆ ಕನ್ನಡಪ್ರಭ ದಿನ ಪತ್ರಿಕೆ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ಸುಳ್ಳು ಸುದ್ದಿ ಪ್ರಸಾರ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಎಂಬಿ ಪಾಟೀಲ್ ಅವರು ಟ್ವೀಟಿಸಿದ್ದಾರೆ.
ನನ್ನ ಬಗ್ಗೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ನಲ್ಲಿ ಸುದ್ದಿ ಪ್ರಸಾರವಾಗಿದೆ. ಅದೆಲ್ಲವೂ ಆಧಾರರಹಿತ.
ಈ ಹಿಂದೆ ಸಿದ್ದರಾಮಯ್ಯನವರ ಹೆಸರಲ್ಲಿ ನಕಲಿ ಪತ್ರವನ್ನು ಹಬ್ಬಿಸಲಾಯಿತು, ತಪ್ಪು ಗ್ರಹಿಕೆಯನ್ನು ಸೃಷ್ಟಿಸಲು ಬಿಜೆಪಿ ಕರ್ನಾಟಕ ಘಟಕ ಪ್ರಯತ್ನಿಸುತ್ತಿದೆ