ADVERTISEMENT
ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಭೇಟಿ ನೀಡಿದ್ದ ವೇಳೆ ರೌಡಿ ಶೀಟರ್ಗೆ ಕೈ ಮುಗಿದಿದ್ದಾರೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರೌಡಿ ಶೀಟರ್ ಫೈಟರ್ ರವಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಡ್ಯದಲ್ಲಿ ಸ್ವಾಗತಿಸಿದ್ದಾರೆ. ಈ ವೇಳೆ ಫೈಟರ್ ರವಿಗೆ ಪ್ರಧಾನಿ ಮೋದಿ ಪ್ರತಿಯಾಗಿ ಕೈ ಮುಗಿದಿದ್ದಾರೆ.
ಅಕ್ರಮ ಹಣ ವರ್ಗಾವಣೆ, ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತು ರಿಯಲ್ ಎಸ್ಟೇಟ್ ವಿವಾದಗಳಲ್ಲಿ ಮಲ್ಲಿಕಾರ್ಜುನ ಎಂ ಬಿ ಅಲಿಯಾಸ್ ಫೈಟರ್ ರವಿ ವಿರುದ್ಧ ಕರ್ನಾಟಕದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ರೌಡಿ ಶೀಟರ್ ಫೈಟರ್ ರವಿಗೆ ಪ್ರಧಾನಿ ಮೋದಿ ಕೈ ಮುಗಿದ ಫೋಟೋವನ್ನು ಲಗತ್ತಿಸಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ
@narendramodi
ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು.
ADVERTISEMENT