ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಲಾದ ಅವಹೇಳನಕಾರಿ ಹೇಳಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.
ದೋಷಿ ಎಂದು ಪ್ರಕಟಿಸಿರುವ ಕೋರ್ಟ್ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.
ಬಳಿಕ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಮಯ ಕೇಳಿದ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ. ಮೇಲ್ಮನವಿಗೆ 30 ದಿನಗಳ ಸಮಯ ನೀಡಲಾಗಿದೆ.
ಗುಜರಾತ್ ರಾಜ್ಯದ ಸೂರತ್ ಜಿಲ್ಲಾ ಕೋರ್ಟ್ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.
ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.
ತೀರ್ಪು ನೀಡುವ ವೇಳೆ ರಾಹುಲ್ ಅವರು ಸೂರತ್ ಕೋರ್ಟ್ನಲ್ಲಿ ಹಾಜರಿದ್ದರು. 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.
ಕಳ್ಳರಿಗೆಲ್ಲ ಮೋದಿ ಎಂಬ ಹೆಸರು ಹೇಗೆ ಬಂದಿದೆ ಎಂದು ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿ ನೀರವ್ ಮೋದಿ ಪ್ರಕರಣವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.
ಮೋದಿ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ADVERTISEMENT
ADVERTISEMENT