ಚುನಾವಣೆಯಲ್ಲಿ ಲಾಭ ಪಡೆಯಲೆಂದೇ ಮುಸ್ಲೀಮರ ಶೇಕಡಾ 4ರಷ್ಟು ಮೀಸಲಾತಿ ರದ್ದು ಮಾಡಿದ ಬಿಜೆಪಿ ಸರ್ಕಾರ, ತಮ್ಮ ನಿಲುವನ್ನು ಸುಪ್ರೀಂಕೋರ್ಟ್ ನಲ್ಲಿ ಸಮರ್ಥನೆ ಮಾಡಿಕೊಳ್ಳಲು ವಿಫಲವಾಗಿದೆ. ಇದರಿಂದ ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನಡೆ ಆಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ದೋಖಾ.. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ಮಾಡಿದ ಮಹಾ ಮೋಸ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಕ್ರೋಶ ಹೊರಹಾಕಿದ್ದಾರೆ.
ಮೀಸಲಾತಿ ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳಲಾಗದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ 9 ಪ್ರಶ್ನೆ ಕೇಳಿದೆ
ಈ 9 ಪ್ರಶ್ನೆಗೆ ಉತ್ತರಿಸುತ್ತಾ ಬಿಜೆಪಿ ಸರ್ಕಾರ
1. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ವಂಚನೆ ಮಾಡಿದ್ದು ಏಕೆ?
2. ಯಾಕೆ ಸುಪ್ರೀಂಕೋರ್ಟ್ನಲ್ಲಿ ಮೀಸಲಾತಿ ಸಮರ್ಥನೆ ಮಾಡಿಕೊಳ್ಳಲಿಲ್ಲ
3. ಮೋದಿ ಮತ್ತು ಬೊಮ್ಮಾಯಿ ಸರ್ಕಾರ ಏಕೆ ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿಲ್ಲ
4. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಶಿಫಾರಸ್ಸನ್ನು ಮೋದಿ ಸರ್ಕಾರ ಮಾರ್ಚ್ 14ರಂದು ತಿರಸ್ಕರಿಸಿದ್ದು ಏಕೆ?
5. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ, ಓಬಿಸಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಶೇಕಡಾ 50ರಷ್ಟು ಮೀಸಲಾತಿಯ ಮಿತಿಯನ್ನು ಏಕೆ ತೆಗೆದು ಹಾಕಲಿಲ್ಲ?
6. ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಏಕೆ ಸೇರಿಸಲಿಲ್ಲ
7. ಅಲ್ಪಸಂಖ್ಯಾತರ ಮೀಸಲಾತಿಯನ್ನು ಅನ್ಯಾಯವಾಗಿ ಟಾರ್ಗೆಟ್ ಮಾಡಿದ್ದು ಏಕೆ?
8. ಬೊಮ್ಮಾಯಿ ಸರ್ಕಾರ ತಮ್ಮದೇ ಸರ್ಕಾರದ ಹೇಳಿಕೆಯನ್ನು ಸುಪ್ರೀಂಕೋರ್ಟ್ನಲ್ಲಿ ಸಮರ್ಥನೆ ಮಾಡಿಕೊಳ್ಳಲಿಲ್ಲ ಏಕೆ?
9. ಮೀಸಲಾತಿ ವಿಚಾರದಲ್ಲಿ ಉಂಟು ಮಾಡಿದ ಗೊಂದಲಕ್ಕಾಗಿ ಬೊಮ್ಮಾಯಿ ಸರ್ಕಾರ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತಾ?