No Result
View All Result
ದೆಹಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಗ್ಯದ ಕಾರಣದಲ್ಲಿ ಜೈನ್ ಅವರಿಗೆ ನ್ಯಾಯಮೂರ್ತಿ ಜೆ ಕೆ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಪೀಠ ಜಾಮೀನು ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ವರ್ಷದ ಮೇ 30ರಿಂದ ಸತ್ಯೇಂದ್ರ ಜೈನ್ ಬಂಧನದಲ್ಲಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರದಂತೆ ನಿರ್ಬಂಧ ಹೇರಿದೆ.
6 ವಾರಗಳ ಮಧ್ಯಂತರ ಜಾಮೀನಿಗೆ ವಿಚಾರಣಾ ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಮುಂದಿನ ವಿಚಾರಣೆ ಜುಲೈ 11ಕ್ಕೆ ಮುಂದೂಡಿಕೆ ಆಗಿದೆ.
ನಿನ್ನೆ ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದಿದ್ದ ಸತ್ಯೇಂದ್ರ ಜೈನ್ ಅವರನ್ನು ಆಸ್ಪತ್ರೆಗೆ ವರ್ಗಾಯಿಸಿ ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.
No Result
View All Result
error: Content is protected !!