ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ (BPL) ಜೊತೆಗೆ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೂ (APL) ಕುಟುಂಬಗಳಿಗೂ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಇವತ್ತು ಅಧಿಕಾರಿಗಳ ಜೊತೆಗೆ ಹಂತ-ಹಂತದ ಸಭೆ ನಡೆಸಿದ್ದಾರೆ.
ಉಚಿತ ವಿದ್ಯುತ್ ಯೋಜನೆ ಜಾರಿ ಸಂಬಂಧ ಮುಖ್ಯಮಂತ್ರಿಗಳಿಗೆ ಸಭೆಯಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ ಅಂದಾಜು 2.14 ಕೋಟಿ ಕುಟುಂಬಗಳು ಲಾಭ ಪಡೆಯಲಿವೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿಅಂಶದ ಪ್ರಕಾರ ಸದ್ಯಕ್ಕೆ ರಾಜ್ಯದಲ್ಲಿರುವ ಬಿಪಿಎಲ್ ಕಾರ್ಡ್ದಾರರ ಸಂಖ್ಯೆ 1 ಕೋಟಿ 27 ಲಕ್ಷ. ರಾಜ್ಯದಲ್ಲಿ ಬಿಪಿಎಲ್ ಕುಟುಂಬದಡಿ ಬರುವ ಜನಸಂಖ್ಯೆ 4 ಕೋಟಿ 30 ಲಕ್ಷ.
ಅಂದರೆ ಬಿಪಿಎಲ್ ಕಾರ್ಡ್ ಹೊರತುಪಡಿಸಿ 87 ಲಕ್ಷ ಕುಟುಂಬಗಳಿಗೆ ಯೋಜನೆಯ ಲಾಭ ಸಿಗಲಿದೆ.
ಕರ್ನಾಟಕದಲ್ಲಿ ವಾರ್ಷಿಕ ವಿದ್ಯುತ್ ಬಳಕೆ 13,575 ದಶಲಕ್ಷ ಯುನಿಟ್. ನಿಗದಿತ ಶುಲ್ಕ, ತೆರಿಗೆ, ಸಹಾಯಧನ ಒಳಗೊಂಡು 12,038 ಕೋಟಿ ರೂಪಾಯಿ ಬೇಕಾಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ADVERTISEMENT
ADVERTISEMENT