ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥ್ ನಾರಾಯಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ತನಿಖೆಗೆ ತಡೆ ನೀಡಿದೆ.
ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು 4 ವಾರಗಳ ಅವಕಾಶ ನೀಡಿದೆ.
ತಮ್ಮ ವಿರುದ್ಧ ಮೈಸೂರು ನಗರದ ದೇವರಾಜ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಅಶ್ವತ್ಥ್ ನಾರಾಯಣ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೂರು ನೀಡಿದವರು ವೀಡಿಯೋ ದಾಖಲೆ ಸಲ್ಲಿಸಿಲ್ಲ ಮತ್ತು ದೂರುದಾರರು ಆ ಕಾರ್ಯಕ್ರಮದಲ್ಲಿ ಇರಲಿಲ್ಲ ಎಂದು ಅಶ್ವತ್ಥ್ ನಾರಾಯಣ್ ಪರ ವಕೀಲರು ಹೈಕೋರ್ಟ್ನಲ್ಲಿ ವಾದಿಸಿದ್ದರು.
ಮಂಡ್ಯದ ಸಾತನೂರಲ್ಲಿ ಇದೇ ಫೆಬ್ರವರಿಯಲ್ಲಿ ಚುನಾವಣಾ ಭಾಷಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುವ ವೇಲೆ ಹೇಗೆ ಮಂಡ್ಯದ ಉರಿಗೌಡ ಮತ್ತು ನಂಜೇಗೌಡ ಟಿಪ್ಪುಸುಲ್ತಾನನನ್ನು ಹೊಡೆದುಹಾಕಿದರೋ ಅದೇ ರೀತಿ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಅಶ್ವತ್ಥ್ ನಾರಾಯಣ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದರು.
ಈ ಮೂಲಕ ಸಿದ್ದರಾಮಯ್ಯ ಅವರ ಕೊಲೆಗೆ ಸುಪಾರಿ ನೀಡಲಾಗಿದೆ, ಪ್ರಚೋದನೆ ನೀಡಲಾಗಿದೆ, ಜೀವ ಬೆದರಿಕೆ ಹಾಕಲಾಗಿದೆ ಮತ್ತು ದ್ವೇಷ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ADVERTISEMENT
ADVERTISEMENT