ADVERTISEMENT
ವಾಣಿಜ್ಯ ಬಳಕೆಯ ಅಡುಗೆ ಅನಿಲದ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 83 ರೂಪಾಯಿ 50 ಪೈಸೆಯಷ್ಟು ಇಳಿಕೆ ಮಾಡಲಾಗಿದೆ.
ಹೊಸ ದರ ಇಂದಿನಿಂದಲೇ ಜಾರಿಯಾಗಲಿದೆ. ದೆಹಲಿಯಲ್ಲಿ ಹೊಸ ದರದ ಪ್ರಕಾರ ವಾಣಿಜ್ಯ ಬಳಕೆಯ ಅಡುಗೆ ಅನಿಲದ ಸಿಲಿಂಡರ್ ಬೆಲೆ 1,773 ರೂಪಾಯಿ ಆಗಲಿದೆ.
ಮೇ ತಿಂಗಳಲ್ಲೂ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ಇಳಿಕೆ ಮಾಡಲಾಗಿತ್ತು.
ಮನೆ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ ಇಲ್ಲ:
ಆದರೆ ಮನೆ ಬಳಕೆಯ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿಲ್ಲ.
ADVERTISEMENT