ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಈ ಮಾರ್ಗಸೂಚಿ ಪ್ರಕಾರ ಎರಡು ವಿಭಾಗಕ್ಕೆ ಸೇರಿದ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗಲ್ಲ.
1. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಈ ಯೋಜನೆಯ ಲಾಭ ಸಿಗಲ್ಲ.
2. ಕುಟುಂಬದ ಯಜಮಾನಿ ಅಥವಾ ಆಕೆಯ ಪತಿ ಜಿಎಸ್ಟಿ ತೆರಿಗೆ ಸಲ್ಲಿಸುತ್ತಿದ್ದರೆ ಅವರಿಗೂ ಈ ಯೋಜನೆಯ ಲಾಭ ಸಿಗಲ್ಲ.
ಗೃಹ ಲಕ್ಷ್ಮೀ ಯೋಜನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆದೇಶ ಹೊರಡಿಸಿದೆ.
ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಇರಲಿದೆ. ಆಗಸ್ಟ್ 15ರಿಂದ ಫಲಾನುಭವಿಗಳ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ಜಮೆ ಆಗಲಿದೆ.
ADVERTISEMENT
ADVERTISEMENT