ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾಗಿದ್ದ 7 ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ಪ್ರಕರಣದಲ್ಲಿ ದೆಹಲಿ ಪೊಲೀಸರು ವರದಿ ಸಲ್ಲಿಸಿದ್ದು, ಸಂಸದರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿ ಆರೋಪಮುಕ್ತಗೊಳಿಸಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ಗೆ ದೆಹಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ಸಂಸದನ ವಿರುದ್ಧ ಅಪ್ರಾಪ್ತ ಬಾಲಕಿ ಕುಸ್ತಿ ಪಟುವಿನ ತಂದೆ ನೀಡಿದ್ದ ದೂರು ಆಧರಿಸಿ ದೆಹಲಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಬಾಲಕಿಯ ಆರೋಪವನ್ನು ಸಾಬೀತುಪಡಿಸಲು ಪೂರಕ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ದೆಹಲಿ ಪೊಲೀಸರು ವರದಿಯಲ್ಲಿ ಹೇಳಿದ್ದಾರೆ.
ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ್ದ ದೂರಿನಡಿಯಲ್ಲಿ ಆರು ಎಫ್ಐಆರ್ಗಳು ದಾಖಲಾಗಿವೆ.
ADVERTISEMENT
ADVERTISEMENT