ADVERTISEMENT
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಕ ಮತ್ತೋರ್ವ ಲಿಂಗಾಯತ ನಾಯಕನನ್ನು ಮುಗಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಬಣ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್!
ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ!
ಎಂದು ಕಾಂಗ್ರೆಸ್ ಆರೋಪಿಸಿದೆ.
ಟಾರ್ಗೆಟ್ ಲಿಂಗಾಯತ ಕಾರ್ಯಾಚರಣೆ ಭಾಗವಾಗಿ ಸಂಸದ ಪ್ರತಾಪ್ ಸಿಂಹ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಜೋಶಿ, ಸಂತೋಷ್ ಅವರುಗಳು @mepratap ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು @BSBommai ಅವರ ಎದೆಗೆ ತಗುಲಿದೆ!
ಎಂದು ಕಾಂಗ್ರೆಸ್ ಆರೋಪಿಸಿದೆ.
ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ಕೊಟ್ಟ ಹೇಳಿಕೆ ಮತ್ತು ಪ್ರತಾಪ್ ಸಿಂಹಗೆ ಬೊಮ್ಮಾಯಿ ಕೊಟ್ಟ ತಿರುಗೇಟು ಉಲ್ಲೇಖಿಸಿ ಇದು ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಮುಗಿಸಲು ಪ್ರಹ್ಲಾದ್ ಜೋಶಿ ಮತ್ತು ಬಿ ಎಲ್ ಸಂತೋಷ್ ಮಾಡುತ್ತಿರುವ ಹುನ್ನಾರ ಎಂದು ಕಾಂಗ್ರೆಸ್ ಆರೋಪಿಸಿದೆ.
ADVERTISEMENT