ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಪಡೆಯಲು ಬಾಡಿಗೆ ಮನೆಯವರು ವಿದ್ಯುತ್ ಮೀಟರ್ನ ಆರ್ ಆರ್ ಸಂಖ್ಯೆಯ ಜೊತೆಗೆ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿದರೆ ಸಾಕು.
ಗೃಹ ಜ್ಯೋತಿ ಯೋಜನೆಯ ಬಗ್ಗೆ ಉಂಟಾಗಿರುವ ಗೊಂದಲಗಳ ಬಗ್ಗೆ ಪ್ರಶ್ನೋತ್ತರ ಮಾದರಿಯಲ್ಲಿ ಇಂಧನ ಇಲಾಖೆ ಆಧೀನ ಕಾರ್ಯದರ್ಶಿ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ.
1. ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ವಿದ್ಯುತ್ ಬಳಕೆದಾರರು ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಸೌಲಭ್ಯವನ್ನು ಪಡೆಯಬಹುದು
ಎಂದು ಇಂಧನ ಇಲಾಖೆ ಹೇಳಿದೆ.
2. ಬಹು ಮನೆಗಳಿರುವ ಅಪಾರ್ಟ್ಮೆಂಟ್ಗಳಿಗೂ ಈ ಯೋಜನೆಯ ಲಾಭ ಸಿಗಲಿದೆ. ಯಾವ ಯಾವ ಮನೆಗಳಿಗೆ ಪ್ರತ್ಯೇಕ ವಿದ್ಯುತ್ ಮೀಟರ್ ಇದೆಯೋ ಹಾಗೂ ಮೀಟರ್ ರೀಡಿಂಗ್ ಮಾಡಲಾಗುತ್ತಿದೆಯೋ ಅಂತಹ ಎಲ್ಲ ಮನೆಗಳಿಗೂ ಯೋಜನೆಯ ಲಾಭ ಸಿಗಲಿದೆ
ಎಂದು ಇಂಧನ ಇಲಾಖೆ ಆಧೀನ ಕಾರ್ಯದರ್ಶಿ ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.
ADVERTISEMENT
ADVERTISEMENT