No Result
View All Result
ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದಂತೆ ಆದೇಶಿಸಿರುವ ಪ್ರಧಾನಿ ಮೋದಿ ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿಪ್ರಾಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು.
ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದಾರೆ.
ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು
ಎಂದು ಭೇಟಿ ವೇಳೆ ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.
No Result
View All Result
error: Content is protected !!