ಪಾರ್ವತಮ್ಮ ರಾಜ್ಕುಮಾರ್ ಸಹೋದರನ ಪುತ್ರ, ನಟ ಸೂರಜ್ (ಧ್ರುವನ್) ಅಫಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಕಾಲಿಗೆ ತೀವ್ರ ಪೆಟ್ಟಾಗಿರುವ ಹಿನ್ನೆಲೆಯಲ್ಲಿ ಕಾಲನ್ನು ಕತ್ತರಿಸಲಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಸೂರಜ್ ಅವರು ಹೋಗುತ್ತಿದ್ದ ಬುಲೆಟ್ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.
ನಟ ಸೂರಜ್ ಅವರು ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದರು. ಟಿಪ್ಪರ್ ಮೈಸೂರು ಕಡೆಯಿಂದ ಬರುತ್ತಿತ್ತು.
ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಟಿಪ್ಪರ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ADVERTISEMENT
ADVERTISEMENT