ಕಾಂಗ್ರೆಸ್‌ ಶಾಸಕನಿಗೆ ಭಾಗಶಃ ಹಿನ್ನಡೆ, ಸದ್ಯಕ್ಕಷ್ಟೇ ನಿರಾಳ

ಕರ್ನಾಟಕ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ ವೈ ನಂಜೇಗೌಡಗೆ ಭಾಗಶಃ ಹಿನ್ನಡೆಯಾಗಿದೆ, ಭಾಗಶಃ ನಿರಾಳರಾಗಿದ್ದಾರೆ.

ಮಾಲೂರು ಶಾಸಕರಾಗಿ ಕೈ ವೈ ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶದ ಭಾಗಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದ್ದು, ಕೆ ವೈ ನಂಜೇಗೌಡ ಕರ್ನಾಟಕ ರಾಜ್ಯ ವಿಧಾನಸಭೆಯ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದೆ.

ಆದಾಗ್ಯೂ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಚುನಾವಣಾ ಆಯೋಗ ಪಾಲಿಸುವಂತೆಯೂ ಮರು ಎಣಿಕೆಯನ್ನು ನಡೆಸುವಂತೆಯೂ ಮತ್ತು ಆ ಮರು ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ಮತ್ತು ನ್ಯಾಯಾಲಯದ ಅನುಮತಿಯ ಹೊರತು ಮರು ಮತ ಎಣಿಕೆಯನ್ನು ಆದೇಶವನ್ನು ಬಹಿರಂಗಪಡಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಇವತ್ತು ನೀಡಿದ ಆದೇಶದಲ್ಲಿ ಹೇಳಿದೆ.

ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನವೆಂಬರ್‌ 24ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....