ಎರಡು ತಿಂಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡುವ ನಿರೀಕ್ಷೆ ಇದೆ.
ಇವತ್ತು ಮಧ್ಯಾಹ್ನ ಬಿರೇನ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾಗಲಿದ್ದು, ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 25ರಂದು ಬಿರೇನ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಮಣಿಪುರದ ದೊಡ್ಡ ಸಮುದಾಯವಾಗಿರುವ ಮೈತಿ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಮಣಿಪುರ ಹೈಕೋರ್ಟ್ ನೀಡಿದ್ದ ಆದೇಶ ಖಂಡಿಸಿ ಮೇ 3ರಂದು ಆರಂಭವಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಮೇ 3ರಿಂದ ಮಣಿಪುರ ಹಿಂಸಾಚಾರಕ್ಕೆ ತುತ್ತಾಗಿದ್ದು 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಮತ್ತು 37 ಸಾವಿರಕ್ಕೂ ಅಧಿಕ ಮಂದಿ ಹಿಂಸಾಚಾರದಿಂದ ನಿರಾಶ್ರಿತರಾಗಿದ್ದಾರೆ.
ಸ್ವತಃ ಬಿಜೆಪಿ ಶಾಸಕರ ನಿಯೋಗವೇ ದೆಹಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿತ್ತು.
ADVERTISEMENT
ADVERTISEMENT