ADVERTISEMENT
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದ ಆರೋಪದ ಮೇರೆಗೆ ಮೈಸೂರಿನ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ ಪ್ರಕಾಶ್ರನ್ನು ಸೇವೆಯಿಂದ ಅಮಾನತು ಮಾಡಿ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಭಾನೋತ್ ಜೂನ್ 30ರಂದು ಆದೇಶ ಹೊರಡಿಸಿದ್ದಾರೆ.
ನ್ಯೂಸ್-1 ಕನ್ನಡ ವಾಹಿನಿಯ ಫೇಸ್ಬುಕ್ ಪೇಜ್ನಲ್ಲಿ ಸಂಸದ ಪ್ರತಾಪ್ ಸಿಂಹಗೆ ಸಂಬಂಧಿಸಿದ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ ಪ್ರಕಾಶ್ ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದರು.
ಈ ಸಂಬಂಧ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ ಪ್ರಕಾಶ್ ವಿರುದ್ಧ ಕ್ರಮಕ್ಕೆ ಕೋರಿ ಜೂನ್ 30ರಂದು ಸ್ಕ್ರೀನ್ ಶಾಟ್ ಸಮೇತ ಮೈಸೂರು ಪೊಲೀಸ್ ಆಯುಕ್ತರಿಗೆ ಸಂಸದ ಪ್ರತಾಪ್ ಸಿಂಹ ದೂರು ನೀಡಿದ್ದರು.
ADVERTISEMENT