ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕವಾಗಿದ್ದಾರೆ.
ಈ ಮೂಲಕ 15 ವರ್ಷದಿಂದ ಕರ್ನಾಟಕದಲ್ಲಿ ಆಪ್ ನಾಯಕತ್ವ ವಹಿಸಿದ್ದ ಪೃಥ್ವಿ ರೆಡ್ಡಿ ಅವರನ್ನು ಆಪ್ ಈಗ ಬದಲಾಯಿಸಿದೆ.
ಪೃಥ್ವಿ ರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಮುಖ್ಯಮಂತ್ರಿ ಚಂದ್ರು ಅವರು 1 ಬಾರಿ ಶಾಸಕರಾಗಿ 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿದ್ದರು.
ಒಂದೂವರೆ ವರ್ಷದ ಹಿಂದೆಯಷ್ಟೇ ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
2008ರಲ್ಲಿ ಪೃಥ್ವಿ ರೆಡ್ಡಿ ಕರ್ನಾಟಕದಲ್ಲಿ ಆಪ್ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದರು.
ಆದರೆ ಕರ್ನಾಟಕದಲ್ಲಿ ಪಕ್ಷದ ಬಲವರ್ಧನೆಗೆ ಚಿರಪರಿಚಿತರನ್ನೇ ರಾಜ್ಯಾಧ್ತಕ್ಷರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಚಂದ್ರು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ.
ಕರ್ನಾಟಕ ದಕ್ಷಿಣ ಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಬಿ ಟಿ ನಾಗಣ್ಣ ಮತ್ತು ಉತ್ತರ ಕರ್ನಾಟಕ ಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಲಾಗಿದೆ.
ADVERTISEMENT
ADVERTISEMENT