ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ಠಾಣೆಯಲ್ಲಿ ಐಪಿಸಿ ಕಲಂ 504, 501(1), (ಬಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ರವಿಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ಟಿ ನರಸೀಪುರದಲ್ಲಿ ಯುವ ಬ್ರಿಗೇಡ್ ಸದಸ್ಯ ವೇಣುಗೋಪಾಲ್ ನಾಯ್ಕ್ ಕೊಲೆಯ ಬಳಿಕ Rajee_Shaivas ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ.
ADVERTISEMENT
ADVERTISEMENT