ADVERTISEMENT
ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯ ಹೆಡ್ಕಾನ್ಸ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 49 ವರ್ಷದ ಪ್ರಕಾಶ್ ಮಿಯಾರು ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಸಿಬ್ಬಂದಿ.
ಇವರು ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಾಜರಬೈಲು ನಿವಾಸಿ.
ನಗರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಸ್ಟೇಬಲ್ ಆಗಿದ್ದ ಇವರು ರಜೆಯಲ್ಲಿದ್ದರು. ಮನೆಯ ಹಿಂಭಾಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಲಹೆ: ಆತ್ಮಹತ್ಯೆ ಪರಿಹಾರವಲ್ಲ. ಮಾನಸಿಕ ಒತ್ತಡ ನಿವಾರಣೆಗೆ ಮನೋತಜ್ಞರ ಸಲಹೆ ಪಡೆಯುವುದು ಉತ್ತಮ. ಉಚಿತ ಸಹಾಯವಾಣಿ ಸಂಖ್ಯೆ: 9152987821
ADVERTISEMENT