ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಈಗ ಕುರುಬ ಸಮುದಾಯ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಕೇಂದ್ರ ಸರ್ಕಾರ ಬುಡಕಟ್ಟು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಕುರುಬ ಸಮುದಾಯದಿಂದ ಹಲವು ಮನವಿಗಳು ಬಂದಿವೆ. ಈ ಸಂಬಂಧ ಮೈಸೂರಲ್ಲಿರುವ ಕರ್ನಾಟಕ ರಾಜ್ಯ ಬುಡುಕಟ್ಟು ಅಧ್ಯಯನ ಸಂಸ್ಥೆಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸುವಂತೆ 2019ರ ಮೇ 4ರಂದು ಸೂಚಿಸಲಾಗಿತ್ತು. ಕರ್ನಾಟಕ ರಾಜ್ಯ ಬುಡಕಟ್ಟು ಅಧ್ಯಯನ ಸಂಸ್ಥೆ ಮಾರ್ಚ್ 23ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
ಈ ವರದಿಯ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಗಿದ್ದು ಮತ್ತು ವರದಿಯನ್ನು ಭಾರತ ಸರ್ಕಾರಕ್ಕೆ ರವಾನಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಹೀಗಾಗಿ ರಾಜ್ಯದ ಎಸ್ಟಿ ಪಟ್ಟಿಯಲ್ಲಿ ಕುರುಬ ಸಮುದಾಯವನ್ನು ಸೇರಿಸುವ ಸಂಬಂಧ ಅಗತ್ಯ ಕ್ರಮಗಳಿಗಾಗಿ ವರದಿಯನ್ನು ಭಾರತ ಸರ್ಕಾರಕ್ಕೆ ಸಲ್ಲಿಸುತ್ತಿದ್ದೇವೆ
ಎಂದು ಕೇಂದ್ರ ಬುಡಕಟ್ಟು ಸಚಿವಾಲಯದ ಕಾರ್ಯದರ್ಶಿ ಅನಿಲ್ ಕುಮಾರ್ ಝಾ ಅವರಿಗೆ ಬರೆದಿರುವ ಪತ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಹೇಳಿದ್ದಾರೆ.
ADVERTISEMENT
ADVERTISEMENT