ADVERTISEMENT
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾಮತಿ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಶಿಷ್ಟಾಚಾರ ಉಲ್ಲಂಘನೆ ಆರೋಪದಡಿಯಲ್ಲಿ ತಾಲೂಕು ಪಂಚಾಯತ್ ಇಒ ದಯಾಮತಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಾಧಿಕಾರಿಯವರು ಅಮಾನತು ಮಾಡಿದ್ದರು.
ಇಒ ಅಮಾನತನ್ನು ಹಿಂಪಡೆಯುವಂತೆ ಮೂಡಬಿದ್ರೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಆಗ್ರಹಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಮಾನತು ಆದೇಶವನ್ನು ವಾಪಸ್ ಪಡೆದಿದೆ.
ಇನ್ನು ಮುಂದೆ ಇಂತಹ ಘಟನೆಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಲು ಎಚ್ಚರಿಕೆ ನೀಡಿ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.
ಇರುವೈಲ್ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಮಾನತು ಆದೇಶವನ್ನೂ ಹಿಂಪಡೆಯಲಾಗಿದೆ.
ಪ್ರಕರಣ ಏನು..?
ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತಿ ಕಟ್ಟಡ ಮತ್ತು ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಹೆಸರನ್ನು ಮುದ್ರಿಸದೇ ಶಿಷ್ಟಾಚಾರ ಉಲ್ಲಂಘಿಸಿದ್ದರು.
ADVERTISEMENT