ಬೆಂಗಳೂರು: ಭವಾನಿ ರೇವಣ್ಣ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಘಟನೆಯಿಂದ ಯಾರಿಗಾದ್ರೂ ನೋವು ಆಗಿದ್ದರೆ ನಾನು ಭವಾನಿ ಪರವಾಗಿ ರಾಜ್ಯ ಜನತೆಗೆ ಕ್ಷಮೆ ಕೇಳುತ್ತೇನೆ.ಅವರ ಬಳಿಯೂ ಕ್ಷಮೆ ಕೇಳಿಸೋಣ ಬಿಡಿ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.
ಏನೋ ಕೋಪದಲ್ಲಿ ಸಿಟ್ಟಾಗಿ ಮಾತನಾಡಿದ್ದಾರೆ ಅಷ್ಟೇ. ನಾವೇನು ಅವರ ಹತ್ತಿರ ಡ್ಯಾಮೇಜ್ ಕಟ್ಟಿಕೊಡಿ ಎಂದು ಕೇಳಿಲ್ಲ.ದೇವಗೌಡರ ಕುಟುಂಬ ಯಾವತ್ತೂ ಯಾರ ಮೇಲೆ ಆ ರೀತಿ ಮಾತನಾಡಿಲ್ಲ.ಹೆಚ್ಚಾ ಕಮ್ಮಿಯಾಗಿದ್ರೆ ಯಾರು ಹೊಣೆ..? ಅವನು ಡ್ರಿಂಕ್ಸ್ ಮಾಡಿ ಗಾಡಿ ಓಡಿಸಿದ್ದ ಎಂದು ಹೇಳಿದ್ದಾರೆ.
ಇನ್ನು ಬೈಕ್ ಅವನೇ ಬಂದು ಸೈಡ್ ನಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಗಾಗುತ್ತಿತ್ತು?.ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ.
ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು?ಅದನ್ನು ಬೇಕೂಂತಲೇ ಯಾರೋ ವೈರಲ್ ಮಾಡಿದ್ದಾರೆ.ಅವರು ಬೈಕ್ ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು?. ಆದ್ದರಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ.ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ.ಸ್ನೇಹಿತರ ಕಾರು ಅಂತ ಹಾಗೇ ಮಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.