CM ಸಿದ್ದರಾಮಯ್ಯ ಐಎಸ್ಐಎಸ್ ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕೆಸರೆರಚುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಾವೇ ಹೂಡಿದ ಅಸ್ತ್ರಕ್ಕೆ ತಗಲಾಕ್ಕೊಂಡಿದ್ದಾರೆ.
ಹುಬ್ಬಳ್ಳಿಯ ಮುಸ್ಲಿಂ ಸಮಾವೇಶದಲ್ಲಿನ ಫೋಟೋ ಕುರಿತಾಗಿ ಸಾಕಷ್ಟು ಟೀಕೆ ಮಾಡುತ್ತಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ಕಾಂಗ್ರೆಸ್ ತಕ್ಕ ಪ್ರತ್ಯುತ್ತರ ನೀಡಿದೆ. ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿಯ ಯತ್ನಾಳ್ ಮುಸ್ಲಿಂ ಟೋಪಿ ಧರಿಸಿ ಮುಸ್ಲಿಂ ಬಾಂಧವರೊಂದಿಗೆ ಇರುವ ಫೋಟೋವನ್ನು ಬಿಡುಗಡೆಗೊಳಿಸಿದೆ. ಅಲ್ಲದೆ ರಾಜಕೀಯ ಪಕ್ಷ ಬದಲಾದಂತೆ “ಹಿಂದೂ ಉಲಿ”ಯ ವೇಷವೂ ಬದಲಾಗುತ್ತದೆ! ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ. ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ.
ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ ಅಂತ ಕಾಂಗ್ರೆಸ್ ಚಾಟಿ ಬೀಸಿದೆ.