ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಬಿಎಂಆರ್ಸಿಎಲ್) ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 10 ಹುದ್ದೆಗಳಿವೆ. ನಿಯೋಜನೆ/ನೇರ ನೇಮಕಾತಿ ಆಧಾರದಡಿ ಭರ್ತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬಹುದು.
ಹುದ್ದೆಗಳ ವಿವರ: ಮ್ಯಾನೇಜರ್ – 4, ಡೆಪ್ಯೂಟಿ ಜನರಲ್ ಮ್ಯಾನೇಜರ್ 6.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಪದವಿ ಹೊಂದಿರಬೇಕು.
ವಯೋಮಿತಿ: ಜನರಲ್ ಮ್ಯಾನೇಜರ್ ಹುದ್ದೆಗೆ 50 ವರ್ಷ, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 45 ವರ್ಷ ವಯೋಮಿತಿ.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಆಯ್ಕೆ
ವೇತನ: ಜನರಲ್ ಮ್ಯಾನೇಜರ್ ಗೆ 1,12,610- 1,60,620 ರೂ ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 63,880- 1,22,540 ರೂ ವೇತನ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನರಲ್ ಮ್ಯಾನೇಜರ್ (ಎಚ್ಆರ್), ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು- 560027 ಇಲ್ಲಿಗೆ ಅರ್ಜಿ ಕಳುಹಿಸಿ.
ನವೆಂಬರ್ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕಡೆಯ ದಿನಾಂಕ ಡಿಸೆಂಬರ್ 15. ಹಾರ್ಡ್ ಕಾಪಿ ಸಲ್ಲಿಕೆಗೆ ಡಿಸೆಂಬರ್ 20 ಕಡೆ ದಿನ.
ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು english.bmrc.co.inಗೆ ಭೇಟಿ ನೀಡಿ.