ಬೆಂಗಳೂರು: ಕೇರಳ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇಂತಹ ಸಂದರ್ಭದಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯಾವುದೇ ನಿರ್ಬಂಧಗಳು ಇರುವುದಿಲ್ಲವೆಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್ಲೈನ್ಸ್ ಇರಲ್ಲ ಎಂದು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಪ್ರಕರಣ ಹೆಚ್ಚಳವಾಗಿಲ್ಲ. ಹೀಗಾಗಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ SARI, ILI ಕೇಸ್ಗಳ ಮೇಲೆ ಬಿಬಿಎಂಪಿ ನಿಗಾವಹಿಸುತ್ತಿದೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿ PHC, ನಮ್ಮ ಕ್ಲಿನಿಕ್ ಕೋವಿಡ್ ಸಿದ್ಧತೆಗಳ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ SARI, ILI ಕೇಸ್ ಮೇಲೆ ನಿಗಾ ಇಡಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಂಬಂಧ ಆರೋಗ್ಯಾಧಿಕಾರಿಗಳ ಸಭೆ ನಡೆಸಲು ಸೂಚನೆ ಕೊಟ್ಟಿದೆ. ನ್ಯೂ ಇಯರ್ ಗೆ ಯಾವುದೇ ಪ್ರತ್ಯೇಕ ಗೈಡ್ ಲೈನ್ಸ್ ಇರುವುದಿಲ್ಲ ಎಂದು ತಿಳಿಸಿದರು.