ಪಾರ್ಕಿಂಗ್ ಲಾಟ್ ನಲ್ಲಿ ನಿಲುಗಡೆ ಮಾಡಲಾಗಿದ್ದ ಸುಮಾರು 30 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾದ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈ ನಗರದ ಫೀನಿಕ್ಸ್ ಮಾಲ್ ಬಳಿಯ ಪಾರ್ಕಿಂಗ್ ಲಾಟ್ ನಲ್ಲಿ ಇಂದು ಮಧ್ಯಾಹ್ನ ಬೈಕ್ ಒಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಪಕ್ಕದಲ್ಲಿ ನಿಲುಗಡೆ ಮಾಡಲಾಗಿದ್ದ ಇತರೆ ಬೈಕ್ ಗಳಿಗೆ ಬೆಂಕಿ ವ್ಯಾಪಿಸಿದೆ. ಪರಿಣಾಮ ಸುಮಾರು 25-30 ಬೈಕ್ ಗಳು ಸುಟ್ಟು ಭಸ್ಮವಾಗಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಲಿ, ಪ್ರಾಣಾಪಾಯವಾಗಲಿ ಸಂಭವಿಸಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಕೂಡಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಘಟನೆಗೆ ಕಾರಣ ತಿಳಿದು ಬಂದಿಲ್ಲ.