ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾಗೆ (Covid-19) ಓರ್ವ ಬಲಿಯಾಗಿದ್ದು, 104 ಸೋಂಕು ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 479ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿ ಓರ್ವ ಮೃತಪಟ್ಟಿದ್ದಾರೆ.
ಇನ್ನುಳಿದಂತೆ ಕೋವಿಡ್-19 ರಿಂದ ಗುಣಮುಖರಾಗಿ ಇಂದು 87 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.41%ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 80 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 380ಕ್ಕೆ ತಲುಪಿದೆ. ಅದೇ ರೀತಿ ಇಂದು ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಹಾಗೂ ದಕ್ಷಿಣ ಕನ್ನಡದಲ್ಲಿ 2 ಕೇಸ್ಗಳು ಪತ್ತೆಯಾಗಿದೆ.