ADVERTISEMENT
ಕನ್ನಡ ನಾಮಫಲಕ ಸಂಬಂಧ ಬುಧವಾರ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ಚಿಕ್ಕಜಾಲದಲ್ಲಿ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ದು ಮತ್ತು ತಡೆಯಲು ಪೊಲೀಸರ ಮೇಲೆ ಹಲ್ಲೆ ನಡೆಸಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ನಾರಾಯಣಗೌಡ ಮತ್ತು ಇತರರ ಮೇಲೆ ಎಫ್ಐಆರ್ ದಾಖಲಾಗಿದೆ.
ನಾರಾಯಣಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ JMFC ನ್ಯಾಯಾಲಯ ಆದೇಶಿಸಿದೆ.
ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಾರಾಯಣಗೌಡ ಮಾತ್ರವಲ್ಲದೇ ಕರವೇಯ 29 ಕಾರ್ಯಕರ್ತರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಟ್ಟಡಗಳ ನಾಮಫಲಕಗಳಲ್ಲಿ ಕನ್ನಡವೇ ಪ್ರಧಾನ ಆಗಿರಬೇಕೆಂದು ಆಗ್ರಹಿಸಿ ಬುಧವಾರ ಕರವೇ ಕಾರ್ಯಕರ್ತರು ಅಂಗಡಿಗಳು, ವಾಣಿಜ್ಯ ಮಳಿಗೆಗಳು ಮತ್ತು ಕಂಪನಿಗಳ ಬೋರ್ಡ್ಗಳನ್ನು ಹರಿದು, ಪುಡಿ-ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.
ADVERTISEMENT