ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ..? ರಾಮಭಕ್ತ ಯಾರಿದ್ದಾರೆ..? ಅವರನ್ನೇ ಬಂಧಿಸಿದ್ದ ಬಿಜೆಪಿ ಸರ್ಕಾರ ಹಿಂದೂ ವಿರೋಧಿ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಸಂಬಂಧ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದನ್ನೇ ಮುಂದಿಟ್ಟುಕೊಂಡು ತಮ್ಮನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ..? ಈಗ ಯಾಕೆ ಈ ಕೂಗಾಟ..?
ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ADVERTISEMENT
ADVERTISEMENT