ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು.ಈ ಹಿನ್ನೆಲೆಯಲ್ಲಿ ಇಂದು ಶ್ರೀಕಾಂತ್ ಪೂಜಾರಿ ಬಿಡುಗಡೆಗೊಳಿಸಲಾಗಿದೆ.
1922 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಮತ್ತಿತರ ಕ್ರಿಮಿನಲ್ ಕೇಸ್ ನಡಿಯಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಮೌಲ್ಯದ 2 ಬಾಂಡ್, ಕೋರ್ಟ್ ವ್ಯಾಪ್ತಿ ಬಿಟ್ಟುಹೋಗಬಾರದು, ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ವಿಧಿಸಿ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿನ್ನೆ ತೀರ್ಪು ಪ್ರಕಟಿಸಿತ್ತು.
ಇನ್ನು ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.