ADVERTISEMENT
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ.
ರಾಜ್ಯಪಾಲರಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ರಾಜಭವನ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕದ ಘನವೆವೆತ್ತ ರಾಜ್ಯಪಾಲರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರು ತಮ್ಮ ನಿವಾಸ (ರಾಜಭವನದಲ್ಲಿ) ಕ್ವಾರಂಟೈನ್ ಆಗಿದ್ದಾರೆ.
ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ರದ್ದುಗೊಳಿಸಲಾಗಿದೆ
ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು ಶಂಕರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ADVERTISEMENT