ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ರೆಸಾರ್ಟ್ ಸೇರಿಕೊಂಡಿದ್ದಾರೆ.
ಕೊರೆಯುವ ಚಳಿ ನಡುವೆಯೇ ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿರುವ ಹನಿ ಡ್ಯೂ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ರೆಸಾರ್ಟ್ನಲ್ಲಿ 10 ಕೋಣೆಗಳನ್ನು ಬುಕ್ ಮಾಡಲಾಗಿದೆ.
ಇಂದಿನಿಂದ ಮೂರು ದಿನಗಳ ಕಾಲ ರೆಸಾರ್ಟ್ನಲ್ಲಿ ಉಳಿದುಕೊಳ್ಳಲಿರುವ ಕುಮಾರಸ್ವಾಮಿಯವರು ಲೋಕಸಭಾ ಚುನಾವಣೆ ಬಗ್ಗೆ ಪಕ್ಷದ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಜೆಡಿಎಸ್ಗೆ ಸಿಗಬಹುದಾದ ಲೋಕಸಭಾ ಕ್ಷೇತ್ರಗಳು ಮತ್ತು ಆ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬ ಬಗ್ಗೆಯೂ ಪಕ್ಷದ ಮುಖಂಡರ ಜೊತೆಗೆ ಕುಮಾರಸ್ವಾಮಿ ಸಮಾಲೋಚಿಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರವನ್ನೂ ಪಡೆದುಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದ್ದು, ಮಂಡ್ಯ ಜಿಲ್ಲೆಯ ಪಕ್ಷದ ನಾಯಕರೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ADVERTISEMENT
ADVERTISEMENT