ಕನ್ನಡದ ಖ್ಯಾತ ನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಂಸೋರೆ ಅವರ ವಿರುದ್ದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದೆ. ವರದಕ್ಷಿಣೆ ಹಾಗೂ ಕೊಲೆಬೆದರಿಕೆ ವಿರುದ್ದ ಮಂಸೋರೆ ಪತ್ನಿ ಅಖಿಲಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಕೋವಿಡ್ ಸಮಯದಲ್ಲಿ ಸಿನಿಮಾ ಮಾಡಲು ನನ್ನ ಪೋಷಕರು ಮಂಜುನಾಥ್ ಅವರಿಗೆ 180 ಗ್ರಾಂ ತೂಕದ ಚಿನ್ನಾಭರಣ, 1 ಕೆ.ಜಿ 500ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ₹ 9 ಲಕ್ಷ ನಗದು ನೀಡಿದ್ದರು. ಮದುವೆ ನಂತರ ₹ 1.50 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ₹2.21 ಲಕ್ಷ ಜಾವಾ ಬೈಕ್ ಹಾಗೂ ₹1.06 ಲಕ್ಷ ಮೊಬೈಲ್ ಕೊಡಿಸಿದ್ದರು. ಇದೀಗ ₹30 ಲಕ್ಷ ಮೌಲ್ಯದ ಕಾರು ಕೊಡಿಸುವಂತೆ ಪತಿ ಹಾಗೂ ಅತ್ತೆ ಪೀಡಿಸುತ್ತಿದ್ದಾರೆ ಎಂದು ಅಖಿಲಾ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಂಜುನಾಥ್ ಸೋಮಕೇಶವ್ ರೆಡ್ಡಿ ಅಲಿಯಾಸ್ ಮಂಸೋರೆ, ಅವರ ತಾಯಿ ವೆಂಕಟಲಕ್ಷಮ್ಮ, ಅಕ್ಕ ಹೇಮಲತಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇದಕ್ಕೆ ಪೊಲೀಸರಿಗೆ ಪ್ರತಿ ದೂರು ನೀಡಿರುವ ಮಂಸೋರೆ, ನನ್ನ ಪತ್ನಿ ಅಖಿಲಾ ಮಾನಸಿಕ ಅಸ್ವಸ್ಥೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಅಲ್ಲದೇ ನನ್ನ ತಾಯಿಯನ್ನು ಮನೆಯಿಂದ ಹೊರಹಾಕುವಂತೆ ಹೇಳಿದ್ದಾಳೆ. ತಾಯಿ ಮೇಲೆ ಹಲ್ಲೆ ಮಾಡಿದ್ದಾಳೆ. ನಾವು ಯಾವುದೇ ಹಣ ಪಡೆದಿಲ್ಲ. ಯಾವುದೇ ತನಿಖೆಗೂ ನಾನು ಸಿದ್ದ ಎಂದು ಮಂಸೋರೆ ಹೇಳಿದ್ದಾರೆ. ಹರಿವು, ನಾತಿ ಚರಾಮಿ, ಆಕ್ಟ್ 1978 ಹಾಗೂ 19.20.21 ಸಿನಿಮಾಗಳನ್ನು ಮಂಸೂರೆ ನಿರ್ದೇಶನ ಮಾಡಿದ್ದಾರೆ.