ಮೂರು ಕೋಟಿ ರೂ. ಮೌಲ್ಯದ ಇ-ಸಿಗರೇಟ್ಅನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು. ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಇ-ಸಿಗರೇಟ್ ಅನ್ನು ನೀಡುತ್ತಿದ್ದ. ಅನ್ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡಂಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಅರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.