ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ಸೈಯದ್ ಅಲ್ತಾಫ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಸುಮಾರು ವರ್ಷಗಳಿಂದ ಕಿದ್ವಾಯಿಯಲ್ಲಿ ಸರ್ಜಿಕಲ್ ಆಂಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆ ಅಮೋಘ ಸಾಧನೆಯನ್ನು ಪರಿಗಣಿಸಿ ಡಾ.ಸೈಯದ್ ಅಲ್ತಾಫ್ ಅವರನ್ನು ರಾಜ್ಯ ಸರ್ಕಾರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದೆ.
ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆಯಾದ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿನ ಅವ್ಯವಹಾರ ಹಾಗೂ ಆಡಳಿತ ವ್ಯವಸ್ಥೆ ಕುಸಿದ ಹಿನ್ನೆಲೆಯಲ್ಲಿ ಡಾ. ವಿ. ಲೋಕೇಶ್ ಅವರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಡಾ.ಲೋಕೇಶ್ ಅವರ ಸ್ಥಾನಕ್ಕೆ, ಸರ್ಜಿಕಲ್ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ.ಸೈಯದ್ ಅಲ್ತಾಫ್ ಅವನ್ನು ತಾತ್ಕಾಲಿಕ ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು, ಫೆ. 6 ರಂದು ನಿರ್ದೇಶಕರ ಹುದ್ದೆಗೆ ವರದಿ ಮಾಡಿಕೊಂಡಿದ್ದಾರೆ.