ಚಿತ್ರದುರ್ಗ: ಫೋಕ್ಸೊ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ವಹಿಸಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಮುರುಘಾ ಶರಣರು ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಲುತ್ತಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹೆಚ್ ಏಕಾಂತಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದ್ದು ಮುರುಘಾ ಶ್ರೀ ಕೈಗೆ ಆಡಳಿತ ನೀಡದಂತೆ ನಿರ್ಬಂಧ ವಿಧಿಸಿದೆ.
ಜೊತೆಗೆ ಮೂರು ದಿನಗಳಲ್ಲಿ ಮುರುಘಾಮಠ ಹಾಗೀ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.