ನಾನು ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದಲು ಬಯಸುತ್ತಿದ್ದೇನೆ ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಕೋಲಾರದ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಕೋಲಾರ ಮೀಸಲು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ರಮೇಶ್ ಕುಮಾರ್ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ. ಇಲ್ಲಿ ಯಾವುದೇ ಮೌಲ್ಯಗಳು ಉಳಿದಿಲ್ಲ. ಹೀಗಾಗಿ ನಾನು ರಾಜಕೀಯ ಜೀವನಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ರಮೇಶ್ ಕುಮಾರ್ ಭಾವುಕವಾಗಿ ಭಾಷಣ ಮಾಡಿದರು.
ಪಕ್ಷದ ಕೆಲವರು ಹಣಕ್ಕಾಗಿ ಅವರನ್ನೇ ಮಾರಿಕೊಂಡು ನನಗೆ ಮೋಸ ಮಾಡಿ ಸೋಲಿಸಿದರು. ನಾನು ಯಾವತ್ತೂ ಹಣ ಪಡೆದು ರಾಜಕೀಯ ಮಾಡಿಲ್ಲ. ತಾಯಿಯಂತಿರುವ ಪಕ್ಷಕ್ಕೆ ಕೆಲವರು ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡಿದ್ರು. ಅವರು ಸರ್ವನಾಶವಾಗುತ್ತಾರೆ ಎಂದು ಕಿಡಿಕಾರಿದರು.
ನನಗೆ ಮೋಸ ಮಾಡಿದವರಿಗೆ ಎಂಥಾ ಸ್ಥಿತಿ ಬರಲಿದೆ ಎಂಬುದನ್ನು ಕಾದು ನೋಡಿ ಎಂದು ರಮೇಶ್ ಕುಮಾರ್ ಬೇಸರದಿಂದ ನುಡಿದರು. ಇನ್ನು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋದಿಲ್ಲ. ನಾನಾಗಲೀ ನನ್ನ ಮಗನಾಗಲೀ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ನಿರ್ಧರಿಸಿದ್ದೇವೆ ಎಂದರು.
ಇನ್ನು ಕೋಲಾರ ಮೀಸಲು ಕ್ಷೇತ್ರದ aಅಭ್ಯರ್ಥಿ ಕೆ ವಿ ಗೌತಮ್ ಪರ ನಾನು ಮತ ಕೇಳೋದಿಲ್ಲ ಆದರೆ ನಾನು ನನ್ನ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಯನ್ನು ನೋಡಿ ಕ್ಷೇತ್ರದ ಜನ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾ.ಲಿ ಎಂದರು.