ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೊಸದೊಂದು ವಿವಾದದಲ್ಲಿ ಸಿಲುಕಿಕೊಂಡಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಸಂಸದ ಉಮೇಶ್ ಜಾಧವ್ ಅವರು ಪಿಎಸ್ಐ ಪರೀಕ್ಷಾ ಹಗರಣದ ಆರೋಪಿ ಮನೆಯಲ್ಲಿ ಭರ್ಜರಿ ಭೋಜನ ಮಾಡಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪೋಟೋಗಳನ್ನು ಟ್ವೀಟಿಸಿದೆ.
PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! Dear @BJP4Karnataka, ನೀವೇ ಆರ್.ಡಿ ಪಾಟೀಲ್ ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ. ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ!
@BYVijayendra ಅವರೇ, ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ..?