ವಿವಾದಿತ ಪೋಸ್ಟ್ಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕರ್ನಾಟಕ ಬಿಜೆಪಿ ಘಟಕದ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಬಿಜೆಪಿ ಘಟಕದ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಎಸ್ಸಿ/ಎಸ್ಟಿ ಮತ್ತು ಒಬಿಸಿ ಮೀಸಲಾತಿ ಮತ್ತು ಅನುದಾನವನ್ನು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಮರಿಗೆ ಕೊಡ್ತಿದ್ದಾರೆ ಎನ್ನುವ ಅನಿಮೇಟೆಡ್ ವೀಡಿಯೋವನ್ನು ಬಿಜೆಪಿ ಕರ್ನಾಟಕ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿತ್ತು.
ಈ ವೀಡಿಯೋ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಚುನಾವಣಾ ಆಯೋಗದ ಸೂಚನೆ ಮೇರೆಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಆ ಎಫ್ಐಆರ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವಿಯಾ ಮತ್ತು ಕರ್ನಾಟಕ ಬಿಜೆಪಿ ಘಟಕದ ಸಾಮಾಜಿಕ ಜಾಲತಾಣದ ಮುಖ್ಯಸ್ಥರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು.
ಈಗಾಗಲೇ ನಡ್ಡಾ, ವಿಜಯೇಂದ್ರ ಮತ್ತು ಮಾಳವಿಯಾಗೆ ನೋಟಿಸ್ ನೀಡಲಾಗಿದ್ದು ವಿಚಾರಣೆಗೆ ಹಾಜರಾಗಲು 7 ದಿನಗಳ ಸಮಯ ನೀಡಲಾಗಿದೆ.
ಪ್ರಕರಣದಲ್ಲಿ ತಾನು ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಾಗಿ ಪ್ರಶಾಂತ್ ಮಾಕನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ADVERTISEMENT
ADVERTISEMENT