ಮೇ 13 ಅಂದರೆ ಮುಂದಿನ ಸೋಮವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 11ರಿಂದ 13ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಮೇ 12 ಮತ್ತು 13ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಮೇ 10 ಅಂದರೆ ಇಂದಿನಿಂದ ಮೇ 13ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ADVERTISEMENT
ADVERTISEMENT