ಬಿಹಾರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು.
ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ನಲ್ಲಿ ರಾತ್ರಿ 9.45ಕ್ಕೆ ಕೊನೆಯುಸಿರೆಳೆದಿದ್ದಾರೆ.
2005ರಿಂದ 2020ರವರೆಗೆ 11 ವರ್ಷಗಳ ಕಾಲ ಎರಡು ಬಾರಿ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು.
ಕಳೆದ ತಿಂಗಳು ಏಪ್ರಿಲ್ 6ರಂದು ತಾವು ಆರು ತಿಂಗಳಿನಿಂದ ಕ್ಯಾನ್ಸರ್ನಿಂದ ಬಳಲುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದ ಮೋದಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಘೋಷಿಸಿದ್ದರು.