ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟವಾಗ್ತಿದೆ. ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಕ್ಷೇತ್ರಗಳನ್ನ ಗೆಲ್ಲಬಹುದು ಎಂಬ ಲೆಕ್ಕಾಚಾರ ನಡೆಯುತ್ತಿದೆ.
ಕರ್ನಾಟಕಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇಶದ ಪ್ರಮುಖ ಚುನಾವಣಾ ವಿಶ್ಲೇಷಕರು ಅಚ್ಚರಿಯ ಸಮೀಕ್ಷೆಯನ್ನು ಮುಂದಿಟ್ಟಿದ್ದಾರೆ. ಆ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೀನಾಯವಾಗಿ ಸೋಲಲಿದೆ. ಕಾಂಗ್ರೆಸ್ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬೀಗಲಿದೆ ಎಂದು ಈ ಸಮೀಕ್ಷೆ ಹೇಳ್ತಿದೆ.
ಕರ್ನಾಟಕದಲ್ಲಿ ಈ ಸಮೀಕ್ಷೆ ಪ್ರಕಾರ ಬರೋಬ್ಬರಿ 22 ಕ್ಷೇತ್ರಗಳನ್ನು ಗೆಲ್ಲಲಿದೆ. ಬಿಜೆಪಿ ಜೆಡಿಎಸ್ ದೋಸ್ತಿ ಕೇವಲ 5 ಸೀಟುಗಳನ್ನು ಮಾತ್ರ ಗೆಲ್ಲಲಿದೆ ಎಂದು ಹೇಳಲಾಗ್ತಿದೆ.
ಕಳೆದ ಬಾರಿಯ ಅಂದ್ರೆ 2019ರ ಲೋಕಸಭಾ ಚುನಾವಣೆಗೆ ಹೋಲಿಸಿದ್ರೆ ಈ ಬಾರಿ ಕಾಂಗ್ರೆಸ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ್ದು, ಕೇವಲ ಒಂದೇ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದ್ದ ಕಾಂಗ್ರೆಸ್ ಈ ಬಾರಿ 21 ಹೆಚ್ಚುವರಿ ಸೀಟುಗಳನ್ನು ಗೆಲ್ಲಲಿದೆ.
ಹಾಗಾದ್ರೆ ಕಾಂಗ್ರೆಸ್ ಗೆಲ್ಲಬಹುದಾದ ಆ 22 ಲೋಕಸಭಾ ಕ್ಷೇತ್ರಗಳು ಯಾವುವು..?
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ ಗೆದ್ದು ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಪಾಟೀಲ್ ಸೋಲಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಹೆಬ್ಬಾಳ್ಕರ್ ಗೆಲ್ಲಲಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಜಯಗಳಿಸಲಿದ್ದಾರೆ.
ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್ ಆರ್ ಅಲಗೂರ್ ಗೆಲ್ಲಲಿದ್ದಾರೆ ಎಂದು ಈ ಸಮೀಕ್ಷೆ ಹೇಳಿದೆ.
ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಗೆಲ್ಲಲಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ್ ಬಸವರಾಜ ಹಿಟ್ನಾಳ್ ಗೆಲ್ಲಲಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ಸೋತು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ತುಕಾರಾಂ ಗೆಲ್ಲಲಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಗೆಲ್ಲಲಿದ್ದಾರೆ ಎಂದು ಈ ಸಮೀಕ್ಷೆ ಹೇಳಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಸಹೋದರ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಸೋತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಗೆಲ್ಲಲಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಮಗ, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಶ್ರೇಯಸ್ ಪಟೇಲ್ ಗೆಲ್ಲಲಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ ಗೆಲ್ಲಲಿದ್ದಾರೆ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸೋತು ಸ್ಟಾರ್ ಚಂದ್ರು ಗೆಲ್ಲಲಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ಕೃಷ್ಣದತ್ತ ಒಡೆಯರ್ ಸೋತು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಗೆಲ್ಲಲಿದ್ದಾರೆ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಗ ಸುನೀಲ್ ಬೋಸ್ ಗೆಲ್ಲಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಅಳಿಯ, ಕುಮಾರಸ್ವಾಮಿ ಭಾವ ಸಿ ಎನ್ ಮಂಜುನಾಥ್ ಸೋತು ಸಂಸದ ಡಿ.ಕೆ ಸುರೇಶ್ ಮತ್ತೆ ಗೆಲ್ಲಲಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೋತು ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ ರಾಜೀವ್ ಗೌಡ ಗೆಲ್ಲಲಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ತೇಜಸ್ವಿಸೂರ್ಯ ಸೋತು ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯರೆಡ್ಡಿ ಗೆಲ್ಲಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲೂ ಕೂಡ ಹಾಲಿ ಸಂಸದ ಪಿ.ಸಿ ಮೋಹನ್ ಸೋತು, ಮನ್ಸೂರ್ ಖಾನ್ ಗೆಲ್ಲಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಬಿಜೆಪಿಯ ಡಾ. ಕೆ ಸುಧಾಕರ್ ಸೋತು, ರಕ್ಷಾ ರಾಮಯ್ಯ ಗೆಲ್ಲಲಿದ್ದಾರೆ
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಮಲ್ಲೇಶ್ ಬಾಬು ಸೋತು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಗೆಲ್ಲಲಿದ್ದಾರೆ.
ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ ಹೊಸದೊಂದು ಇತಿಹಾಸ ಸೃಷ್ಟಿಸಲಿದೆ. ವಿಧಾನಸಭಾ ಚುನಾವಣೆಯಲ್ಲಿ ಎದ್ದಿದ್ದ ಕಾಂಗ್ರೆಸ್ ಬಿರುಗಾಳಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಧೂಳೀಪಟ ಮಾಡಲಿದೆ ಎಂದು ಚುನಾವಣಾ ವಿಶ್ಲೇಷಕ ಸಾಯಿಬ್ಪಾಲ್ ಪಂಡಿತ್ ಅವರು ಚುನಾವಣಾ ಸಮೀಕ್ಷೆಯನ್ನು ಮುಂದಿಟ್ಟಿದ್ದಾರೆ.
ADVERTISEMENT
ADVERTISEMENT