ADVERTISEMENT
ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಧನ್ಯವಾದ ಯಾತ್ರೆ ಘೋಷಿಸಿದೆ.
ಉತ್ತರಪ್ರದೇಶದಲ್ಲಿ ಜೂನ್ 11ರಿಂದ ಜೂನ್ 15ರವರೆಗೆ ಐದು ದಿನ ಧನ್ಯವಾದ ಯಾತ್ರೆ ಕೈಗೊಳ್ಳಲಿದೆ.
ಇವತ್ತು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಧನ್ಯವಾದ ಯಾತ್ರೆಯಲ್ಲಿ ರಾಯಬರೇಲಿಯಲ್ಲಿ ದಾಖಲೆಯ ಮತಗಳದಿಂದ ಗೆದ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 17 ಲೋಕಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಗೆದ್ದಿದೆ. ಶೇಕಡಾ 9.46ರಷ್ಟು ಮತವನ್ನು ಪಡೆದುಕೊಂಡಿದೆ. 2014ರಲ್ಲಿ 2 ಮತ್ತು 2019ರಲ್ಲಿ ಕೇವಲ 1 ಲೋಕಸಭಾ ಕ್ಷೇತ್ರವನ್ನು ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿತ್ತು.
ADVERTISEMENT