ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ.
ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರಿಗೆ ಅಭಿನಂದಿಸಿ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಹಿತಾಸಕ್ತಿ ಕಾಪಾಡುವಂತೆ ಸಲಹೆ ನೀಡಿದ್ದಾರೆ.
ADVERTISEMENT
ADVERTISEMENT