ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆ ಬಾಲಕಿಯ ಸಹೋದರ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಹಲವು ತಿಂಗಳು ಕಳೆದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕೆಯ ಸಹೋದರ ದಾವೆಯಲ್ಲಿ ವಾದಿಸಿದ್ದಾರೆ.
ಆ ಆಪ್ರಾಪ್ತ ಬಾಲಕಿ ಕಳೆದ ತಿಂಗಳು ಅಂದರೆ ಮೇ 26ರಂದು ಪ್ರಾಣಬಿಟ್ಟಿದ್ದಳು.
2015ರಲ್ಲಿ ನಡೆದಿದ್ದ ಹಲ್ಲೆ ಪ್ರಕರಣ ಸಂಬಂಧ ಸಹಾಯ ಕೇಳಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಹೋಗಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆ ಆಪ್ತಾಪ್ತೆ ದೂರಿದ್ದಳು.
ಪ್ರಕರಣ ದಾಖಲಾದ ಬಳಿಕ ಯಡಿಯೂರಪ್ಪ ಮನೆಯ ಸಿಸಿಟಿವಿಯನ್ನು ಪೊಲೀಸರು ಜಪ್ತಿ ಮಾಡಿಲ್ಲ. ಪೋಕ್ಸೊ ಕಾಯ್ದೆಯ ಪ್ರಕಾರ ಆರೋಪಿಯಾಗಿರುವ ಯಡಿಯೂರಪ್ಪಗೆ ನೋಟಿಸ್ ನೀಡಿ ವಿಚಾರಣೆಗೆ ಕರೆದಿಲ್ಲ ಎಂದು ಸಹೋದರ ಆರೋಪಿಸಿದ್ದಾರೆ.
17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ಪ್ರಕರಣ ದಾಖಲಿಸಲಾಗಿತ್ತು
ಫೆಬ್ರವರಿಯಲ್ಲಿ ಮಹಿಳೆಯೊಬ್ಬರು ನಮ್ಮ ಮಗಳೊಂದಿಗೆ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಂಚನೆ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಿದ್ದರು. ಈ ವೇಳೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈಗಾಗಲೇ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಯ ವಿಶೇಷ ಘಟಕಕ್ಕೆ ವರ್ಗಾಯಿಸಿದೆ.
ADVERTISEMENT
ADVERTISEMENT