ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಭವಾನಿ ರೇವಣ್ಣ ಬಂಧನದ ಭೀತಿಯಿಂದ ಪಾರಾಗಿದ್ದಾರೆ.
ಪ್ರಕರಣದಲ್ಲಿ ಮಹಿಳೆಯೊಬ್ಬರ ಅನಗತ್ಯ ಬಂಧನವನ್ನು ತಡೆಯುವುದು ಅಗತ್ಯ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಪೀಠ ಆದೇಶದಲ್ಲಿ ಹೇಳಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ಮಹಿಳೆಯನ್ನು ಅನಗತ್ಯವಾಗಿ ಬಂಧಿಸುವಂತಿಲ್ಲ. ಭಾರತದಲ್ಲಿ ಆಕೆಯೇ ಕುಟುಂಬದ ಕೇಂದ್ರ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಹೇಳಿದ್ದಾರೆ.
ಭವಾನಿ ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಸರ್ಕಾರದ ಆರೋಪವನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ. ಭವಾನಿ ರೇವಣ್ಣ ತಮಗೆ ವಿಚಾರಣೆ ವೇಳೆ ಕೇಳಲಾದ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ, ಹೀಗೆ ಉತ್ತರ ನೀಡಬೇಕೆಂದು ಪೊಲೀಸರು ನಿರೀಕ್ಷೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ADVERTISEMENT
ADVERTISEMENT