ADVERTISEMENT
ರಾಜ್ಯ ಸರ್ಕಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ನಾಳೆ ಅಂದರೆ ಬುಧವಾರ ಡಿಸೆಂಬರ್ 11ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಮತ್ತು ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅನುದಾನಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಇವತ್ತಿನಿಂದ ಗುರುವಾರ ಅಂದರೆ ಡಿಸೆಂಬರ್ 12ರವರೆಗೂ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಮೂರು ದಿನ ರಾಜ್ಯದಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭಗಳು ನಡೆಯಲ್ಲ. ಈ ಮೂರು ದಿನ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ.
ಇವತ್ತು ಬೆಳಗಿನ ಜಾವ 2.30ಕ್ಕೆ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಮತ್ತು ಮಾಜಿ ವಿದೇಶಾಂಗ ಸಚಿವರೂ ಆಗಿದ್ದ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.
ನಾಳೆ ಕೃಷ್ಣ ಅವರು ತವರೂರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ADVERTISEMENT