ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.
ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ ಮೂರು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಆದಾಯ ತೆರಿಗೆ ಇಲಾಖೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರ ಪೀಠದಲ್ಲಿ ವಿಚಾರಣೆ ನಡೆಯಿತು.
ಇತ್ತ ತಮ್ಮ ವಿರುದ್ಧ ದಾಖಲಾಗಿರುವ ಆದಾಯ ತೆರಿಗೆ ಪ್ರಕರಣಗಳನ್ನು ರದ್ದುಗೊಳಿಸುವಂತೆಯೂ ಡಿ ಕೆ ಶಿವಕುಮಾರ್ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ/
ಆದಾಯ ತೆರಿಗೆ ಇಲಾಖೆಗೆ ಅಫಿಡವಿಟ್ ಸಲ್ಲಿಕೆಗೆ ೨ ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ
ADVERTISEMENT
ADVERTISEMENT