ವಕ್ಫ್ ಆಸ್ತಿ ಒತ್ತುವರಿ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠ ವಜಾಗೊಳಿಸಿದೆ.
ಅಷ್ಟೇ ಅಲ್ಲ, ಪ್ರಚಾರಕ್ಕಾಗಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರಿಗೆ ದಂಡವನ್ನೂ ವಿಧಿಸಿದೆ.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ಅರ್ಜಿಗಳನ್ನು ವಜಾಗೊಳಿಸಿದೆ.
ಇದು ಪ್ರಚಾರಕ್ಕಾಗಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ . ಅರ್ಜಿದಾರರ ಪ್ರಾಮಾಣಿಕತೆಯು ಪ್ರಶ್ನಾರ್ಹವಾಗಿದೆ. ಅರ್ಜಿಯಲ್ಲಿ ಯಾವುದೇ ಮೆರಿಟ್ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ನ ಪೀಠ, ಅರ್ಜಿದಾರರು 10 ಸಾವಿರ ರೂಪಾಯಿ ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 15 ದಿನಗಳಲ್ಲಿ ಪಾವತಿಸಬೇಕು ಎಂದು ಆದೇಶಿಸಿತು.
ಆದರೆ ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ದಂಡ ಕಟ್ಟುವಂತೆ ನೀಡಿದ್ದ ಆದೇಶವನ್ನು ಕೈಬಿಟ್ಟಿತ್ತು.
ADVERTISEMENT
ADVERTISEMENT